• 22 ನವೆಂಬರ್ 2024

ಮೋದಿಯನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆ ಸಿದ್ದರಾಮಯ್ಯಗೆ: ಯಡಿಯೂರಪ್ಪ.

 ಮೋದಿಯನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆ ಸಿದ್ದರಾಮಯ್ಯಗೆ: ಯಡಿಯೂರಪ್ಪ.
Digiqole Ad

ಮೋದಿಯನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆ ಸಿದ್ದರಾಮಯ್ಯಗೆ: ಯಡಿಯೂರಪ್ಪ.

ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ ತಾವೂ ದೊಡ್ಡ ನಾಯಕರಾಗುತ್ತೇವೆ ಎನ್ನುವ ಭ್ರಮೆ ಸಿದ್ದರಾಮಯ್ಯ ಅವರಿಗೆ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬ ಬಗ್ಗೆ ಮುಖ್ಯಮಂತ್ರಿಯಾಗಿ ಅವರೇ ಯೋಚಿಸಬೇಕು’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ‘ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ’ ಎಂಬ ಸಿದ್ದರಾಮಯ್ಯ ಅವರ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗುವುದಿಲ್ಲ.

ಈ ಸುದ್ದಿಯನ್ನು ಓದಿದ್ದೀರಾ.?ಉಜಿರೆ; ರುಟ್ ಸೆಟ್ ನಲ್ಲಿ ಕೃಷಿ ಸಖಿಯರಿಗೆ 5 ದಿನಗಳ ತರಬೇತಿ

ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿ.ಎಂ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಿ’ ಎಂದು ಹೇಳಿದರು. ‘ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ಹಣಕಾಸಿನ ನೆರವಿನ ಬಗ್ಗೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ, ಇವರು ಮೋದಿ ಅವರನ್ನು ಟೀಕಿಸಿ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು. ‘ಮೋದಿ ಹೆಸರು ಹೇಳಿ ಮತ ಕೇಳಿದರೆ ಕಪಾಳಮೋಕ್ಷ ಮಾಡಿ’ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ಶಿವರಾಜ್ ತಂಗಡಗಿಗೆ ಇದು ಶೋಭೆ ತರುವುದಿಲ್ಲ. ಕಾಂಗ್ರೆಸ್ಸಿಗೂ ಶೋಭೆ ತರುವುದಿಲ್ಲ. ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಆ ಪಕ್ಷವೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ಮಂಡ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, ‘ಬಹುತೇಕ ಕುಮಾರಸ್ವಾಮಿ ಅವರೇ ಮಂಡ್ಯದಲ್ಲಿ ಸ್ಪರ್ಧಿಸುವುದು ನಿಶ್ಚಯವಾಗಿದ್ದು, ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸಮಾಧಾನದಿಂದ ಇದ್ದರೆ ಮುಂದೆ ಸೂಕ್ತ ಸ್ಥಾನಮಾನ ಸಿಗಬಹುದು.

ಈ ಸುದ್ದಿಯನ್ನು ಓದಿದ್ದೀರಾ.?ಫೈನ್ ಹಾಕಿದ್ದಕ್ಕೆ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲು ಪ್ರಯತ್ನ!

ದೆಹಲಿಯವರು ಕರೆದು ಅವರ ಜೊತೆ ಮಾತನಾಡುತ್ತಾರೆ’ ಎಂದು ಹೇಳಿದರು. ‘ಪ್ರಮುಖ ನಾಯಕರೆಲ್ಲರೂ ಇಂದು ಬೆಳಗಾವಿಯಲ್ಲಿ ಸಭೆಯಲ್ಲಿ ಸೇರಿದ್ದರು. ಎಲ್ಲರೂ ಒಮ್ಮತದಿಂದ ಜಗದೀಶ ಶೆಟ್ಟ‌ರ್ ಅವರನ್ನು ಬಹು ದೊಡ್ಡ ಅಂತರದಲ್ಲಿ ಗೆಲ್ಲಿಸುವ ಭರವಸೆ ಕೊಟ್ಟಿದ್ದಾರೆ. ನನಗೂ ವಿಶ್ವಾಸವಿದ್ದು, ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ. ಈ ಸಲ 28 ಕ್ಷೇತ್ರ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ