• 8 ಸೆಪ್ಟೆಂಬರ್ 2024

ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ:ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್‌ 

 ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ:ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್‌ 
Digiqole Ad

ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ:ಗೋವಿಂದ್ ಕಾರಜೋಳಗೆ ಚಿತ್ರದುರ್ಗ ಟಿಕೆಟ್‌ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿಸಿಕೊಂಡಿದ್ದ ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಾರಾಯಣಸ್ವಾಮಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ cm ಗೋವಿಂದ್ ಕಾರಜೋಳಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ. ಇದರೊಂದಿಗೆ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಬಿಎನ್‌ ಚಂದ್ರಪ್ಪ ಅವರ ವಿರುದ್ಧ ಗೋವಿಂದ ಕಾರಜೋಳ ಸ್ಪರ್ಧೆ ಮಾಡಲಿದ್ದಾರೆ. ವಿಜಯಪುರದಿಂದ ಟಿಕೆಟ್‌ ನಿರೀಕ್ಷೆ ಇಟ್ಟಿದ್ದ ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್‌ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 25 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಕೇಂದ್ರ ಸಚಿವ ನಾರಾಯಣಸ್ವಾಮಿ ನಿರಾಸಕ್ತಿಯಿಂದಾಗಿ ಈ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ತಲೆಕೆಡಿಸಿಕೊಂಡಿತ್ತು. ಕೊನೆಗೆ ಅಳೆದು ತೂಗಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ