• 8 ಸೆಪ್ಟೆಂಬರ್ 2024

ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್; ಕಂಪನಿ ಕೊಟ್ಟ ಸ್ಪಷ್ಟನೆ ಏನು.?

 ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್; ಕಂಪನಿ ಕೊಟ್ಟ ಸ್ಪಷ್ಟನೆ ಏನು.?
Digiqole Ad

ಸಹೋದರಿ ಮದುವೆಗೆ ಕೆಲವು ದಿನಗಳು ಬಾಕಿ ಇರುವಾಗ Zomato ಐಡಿ ಬ್ಲಾಕ್; ಕಂಪನಿ ಕೊಟ್ಟ ಸ್ಪಷ್ಟನೆ ಏನು.?

ಮುಂಬೈ: ಭಾರತದ ಜನಪ್ರಿಯ ಫುಡ್ ಡೆಲಿವರಿ ಆ್ಯಪ್ ಜೊಮ್ಯಾಟೋ ಗ್ರಾಹಕರನ್ನು ತನ್ನತ್ತ ಸೆಳೆಯಲು ಹಲವು ರೀತಿಯ ಆಫರ್‌ಗಳನ್ನು ನಿರಂತರವಾಗಿ ನೀಡುತ್ತಿರುತ್ತದೆ. ಅದಕ್ಕೆ ತಕ್ಕಂತೆ ಡೆಲಿವರಿ ಬಾಯ್ಸ್ ಸಹ ಸಮಯಕ್ಕೆ ಸರಿಯಾಗಿ ಗ್ರಾಹಕರಿಗೆ ಆರ್ಡರ್ ತಲುಪಿಸುತ್ತಿದ್ದು, ಕಂಪನಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಸಖತ್ ಹಿಟ್ ಆಗ್ತಿದೆ ಯೋಗರಾಜ್ ಭಟ್ರ RCB ಜಿಂಗಲ ಜಿಂಗಲ ಜೈ ಹಾಡು

ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಜೊಮ್ಯಾಟೋ ತನ್ನ ಫುಡ್ ಡೆಲಿವರಿ ಬಾಯ್ ಒಬ್ಬರ ಖಾತೆಯನ್ನು ಅಮಾನತು ಮಾಡಿದ್ದು, ಇದು ಹಲವರ ಕಣ್ಣು ಕೆಂಪಾಗಿಸಿದೆ. ತನ್ನ ಸಹೋದರಿ ಮದುವೆಗೆ ಕೆಲವೇ ದಿನಗಳು ಬಾಕಿ ಇರುವ ಸಮಯದಲ್ಲಿ ಈ ರೀತಿ ಆಗಿದ್ದು, ನೆಟ್ಟಿಗರು ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ವಕೀಲ ಸಮೀರ್ ಭಟ್ಟಾಚಾರ್ಯ ಮುಂಬೈನಲ್ಲಿ ಡೆಲಿವರಿ ಏಜೆಂಟ್‌ ಆಗಿ ಕೆಲಸ ಮಾಡುತ್ತಿರುವ ಆಯುಷ್ ಸೈನಿ ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ ಆತ ತನ್ನ ಸಹೋದರಿಯ ಮದುವೆಗೆ ಕೆಲವೇ ದಿನಗಳು ಬಾಕಿಯಿದ್ದು, ಈಗಿರುವಾಗಲೇ ಜೊಮ್ಯಾಟೋ ತನ್ನ ಐಡಿಯನ್ನು ಬ್ಲಾಕ್ ಮಾಡಿರುವುದಾಗಿ ತಿಳಿಸಿದ್ದಾನೆ.

ಈ ಸುದ್ದಿಯನ್ನು ಓದಿದ್ದೀರಾ.?ಕೃಷ್ಣ ಜನ್ಮಾಷ್ಟಮಿಯ ಕಥೆ,ಹಿನ್ನಲೆ, ಮಹತ್ವಗಳನ್ನು ತಿಳಿಯೋಣ!

ಆದರೆ, ಆತ ಎಷ್ಟರ ಮಟ್ಟಿಗೆ ನಿಜ ಹೇಳುತ್ತಿದ್ದಾನೆ ಎಂಬುದು ನನಗೆ ತಿಳಿಯಲಿಲ್ಲ. ಆತ ಆಳುತ್ತಿದದ್ದು ಮಾತ್ರ ನಿಜ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಜೊಮ್ಯಾಟೋ, ನಾವು ಗ್ರಾಹಕರ ಜೊತೆಜೊತೆಗೆ ಡೆಲಿವರಿ ಏಜೆಂಟ್‌ಗಳಿಗೂ ಹೆಚ್ಚು ಗೌರವವನ್ನು ನೀಡುತ್ತೇವೆ. ಆತನ ಐಡಿ ಬ್ಲಾಕ್ ಆಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಕಂಪನಿಯೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ