• 15 ಜೂನ್ 2024

ಅಕ್ರಮ ಗೋಸಾಗಾಟದ ಕಾರು ಡಿಕ್ಕಿ,ವ್ಯಕ್ತಿ ಸ್ಥಳದಲ್ಲೇ ಮೃತ್ಯು

 ಅಕ್ರಮ ಗೋಸಾಗಾಟದ ಕಾರು ಡಿಕ್ಕಿ,ವ್ಯಕ್ತಿ ಸ್ಥಳದಲ್ಲೇ ಮೃತ್ಯು
Digiqole Ad

ಅಕ್ರಮ ಗೋಸಾಗಾಟದ ಕಾರು ಡಿಕ್ಕಿ,ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಅಮಾನವೀಯ ಘಟನೆ ಒಂದು ಮರ್ಧಾಳ ಜಂಕ್ಷನ್ ನಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ವಿಠಲ ರೈಯವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ವೇಗವಾಗಿ ತೆರಳುತ್ತಿದ್ದ ಗೋ ಸಾಗಾಟದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆದರೆ,

ಆರೋಪಿಗಳು ಕಾರು ಮರ್ಧಾಳ ಸಮೀಪದ ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ.

ಅಕ್ರಮ ಗೋಸಾಗಾಟ ಜಿಲ್ಲೆಯಾದ್ಯಂತ ನಡೆಯುತ್ತಿದೆ ಸರ್ಕಾರ ಒಂದು ವರ್ಗದ ಜನರ ಓಲೈಕೆಯಿಂದಾಗಿ ಕಡಬದಲ್ಲಿ ಅಮಾಯಕ ಹಿಂದೂವಿನ ಮರಣವಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಈ ಘಟನೆಯನ್ನು ಖಂಡಿಸಿದ್ದಾರೆ.  ಅಮಾಯಕ ವಿಠಲ ರೈ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಎಂದರು ಪುತ್ತಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೀಘ್ರ ನೈಜ ಆರೋಪಿಗಳ ಬಂಧನವಾಗಬೇಕು ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಕ್ಕೆ ಸರ್ಕಾರವೇ ಹೊಣೆಯಾಬೇಕಾದೀತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!