ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ – ಲೋಗೋ ಅನಾವರಣ
ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ – ಲೋಗೋ ಅನಾವರಣ
ಕಡಬ ತಾಲೂಕು ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಸುವರ್ಣ ಸಂಭ್ರಮದ ಲೋಗೋ ಅನಾವರಣ ಕಾರ್ಯಕ್ರಮ ಭಜನಾ ಮಂದಿರದಲ್ಲಿ ನಡೆಯಿತು.
ಈ ಸುದ್ದಿ ಓದಿದ್ದೀರಾ…. ಅಪಾಯಕಾರಿ ನಾಯಿ ತಳಿಗಳ ಮೇಲಿನ ನಿಷೇಧಕ್ಕೆ ಹೈಕೋರ್ಟ್ ತಡೆ
ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಚಂದ್ರಯ್ಯ ಆಚಾರ್ಯ ಅಬೀರ ಲೋಗೋ ಅನಾವರಣಗೊಳಿಸಿದರು. ನಂತರ ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸಭೆ ನಡೆಯಿತು. ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮಾತನಾಡಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮವನ್ನು ಯಶಸ್ವಿಯಾಗಿ ಆಚರಿಸುವ ನಿಟ್ಟಿನಲ್ಲಿ ಏ. 9ರ ಚಂದ್ರಮಾನ ಯುಗಾದಿಯಂದು ನಗರ ಭಜನೆ ಪ್ರಾರಂಭಗೊಂಡು, ಮೇ 21,22ರಂದು ಏಕಾಹ ಭಜನೆ, ಗಣಹೋಮ, ನರಸಿಂಹ ಜಯಂತಿ ಪೂಜೆ, ಸತ್ಯನಾರಾಯಣ ಪೂಜೆ ಉಧ್ಯಪನೆ ಹಾಗೂ ನಗರ ಭಜನಾ ಮಂಗಲೋತ್ಸವ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಹಂತ ಹಂತವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಭಜನಾ ಮಂಡಳಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ ಅಧ್ಯಕ್ಷತೆ ವಹಿಸಿದರು.
ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪದ್ಮಯ್ಯ ಗೌಡ ಅನಿಲ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ ಸ್ವಾಗತಿಸಿ, ಕೋಶಾಧಿಕಾರಿ ಕೀರ್ತಿ ಕುಮಾರ್ ಏಳುವೆ ವಂದಿಸಿದರು.
ಈ ಸುದ್ದಿ ಓದಿದ್ದೀರಾ… ಗಮನಿಸಿ: ಇಂದು ಬ್ಯಾಂಕ್ಗಳಿಗೆ ರಜೆ ಇಲ್ಲ
ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
www.goldfactorynews.com
Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.