ಬಂಟ್ವಾಳ; ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬಂಟ್ವಾಳ; ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಪದ್ಮನಾಭ (34) ಎಂಬವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ… ಜಾಹ್ನವಿ ಹುಟ್ಟು ಹಬ್ಬ; ಮೊಣ ಕಾಲಿನಲ್ಲಿ ಮೆಟ್ಟಿಲ ಹತ್ತಿ ದೇವರ ದರ್ಶನ ಪಡೆದ ನಟಿ
ಚೆನ್ನೈತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿಯಾಗಿರುವ ಇವರು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿದ್ದರು.
ಭಾನುವಾರ ಬೆಳಗ್ಗೆ ಅವರ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಅವರ ಸಹೋದರ ನೀಡಿದ ದೂರಿನಂತೆ, ಪದ್ಮನಾಭ ಅವರು ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದು, ಮನೆಗೆ 2-3 ದಿನಗಳಿಗೊಮ್ಮೆ ಬರುತ್ತಿದ್ದರು. ಮಾರ್ಚ್ 28ರಂದು ಪದ್ಮನಾಭ ಸಾವಂತ ಮನೆಯಲ್ಲಿರದೆ ಮೋಟಾರು ಸೈಕಲ್ ಮಾತ್ರ ಮನೆಯಲ್ಲಿದ್ದು, ರಾತ್ರಿ ದೂರವಾಣಿ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸಿರಲಿಲ್ಲ.
ಮಾರ್ಚ್ 31ರಂದು ಬೆಳಿಗ್ಗೆ ಮೃತದೇಹ ತೋಟದ ಹತ್ತಿರ ಇರುವ ಗುಡ್ಡ ಜಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ, ಅನುಮಾನಾಸ್ಪದ ಸಾವು ಕಂಡು ಬಂದಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ, ಅನುಮಾನಾಸ್ಪದ ರೀತಿಯಲ್ಲಿ ನೇತಾಡುತ್ತಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ… ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ