• 26 ಜುಲೈ 2024

ಮೋದಿ ಗೆಲುವಿಗಾಗಿ ತನ್ನ ಕೈ ಬೆರಳನ್ನೆ ಕಾಳಿಮಾತೆಗೆ ಅರ್ಪಿಸಿದ ಅಪ್ಪಟ ಅಭಿಮಾನಿ.

 ಮೋದಿ ಗೆಲುವಿಗಾಗಿ ತನ್ನ ಕೈ ಬೆರಳನ್ನೆ ಕಾಳಿಮಾತೆಗೆ ಅರ್ಪಿಸಿದ ಅಪ್ಪಟ ಅಭಿಮಾನಿ.
Digiqole Ad

ಮೋದಿ ಗೆಲುವಿಗಾಗಿ ತನ್ನ ಕೈ ಬೆರಳನ್ನೆ ಕಾಳಿಮಾತೆಗೆ ಅರ್ಪಿಸಿದ ಅಪ್ಪಟ ಅಭಿಮಾನಿ.

ಕಾರವಾರ: ಲೋಕಸಭಾ ಚುನಾವಣೆಗೆ ಇನ್ನು ಬೆರಳೆಣಿಕೆಯ ದಿನಗಳು ಅಷ್ಟೇ ಬಾಕಿಯಿದೆ. ಹೀಗಿರುವಾಗ ಕಾರವಾರದಲ್ಲಿ ಪ್ರಧಾನಿ ಮೋದಿ ಅಂಧಾಭಿಮಾನಿಯೊಬ್ಬ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ತನ್ನ ಬೆರಳನ್ನು ಕಾಳಿ ಮಾತೆಗೆ ಅರ್ಪಿಸಿದ್ದಾನೆ. ಅಂದ್ಹಾಗೆ ಈ ಘಟನೆಗೆ ಸಾಕ್ಷಿಯಾದದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಇಲ್ಲಿನ ಅರುಣ್ ವರ್ಣೇಕರ್ ಎಂಬ ವ್ಯಕ್ತಿ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ದಿನಾಲೂ ಪೂಜೆ ಕೂಡ ಮಾಡುತ್ತಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಆಶಿರ್ವಾದ ಸ್ಕೀಂ: 3 ಉಚಿತ ಮನೆಯನ್ನು ಗೆಲ್ಲುವ ಅವಕಾಶ…ಇಲ್ಲಿದೆ ಪೂರ್ತಿ ಮಾಹಿತಿ

ಬೆರಳು ಕತ್ತರಿಸಿಕೊಂಡು ಅರುಣ್, ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆ ಮೇಲೆ ರಕ್ತದಲ್ಲಿ ರಕ್ತದಲ್ಲಿ ಬರೆದಿದ್ದಾರೆ. ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ” ಎಂದು ಬರೆದಿದ್ದಾರೆ. “ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್’ ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್ನಲ್ಲಿ ಅರುಣ್ ಬರೆದುಕೊಂಡಿದ್ದಾರೆ. ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಸಲ್ಲಿಸಿದ್ದಾರೆ. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ಕೊಟ್ಟಿದ್ದರು. ಇದು ಕೊನೆಯಬಾರಿ ಆದ್ದರಿಂದ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಕಾಳಿಮಾತೆಗೆ ಅರ್ಪಿಸಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಪಾಲಕರ ಹೃದಯಾಘಾತಕ್ಕೆ ಕಾರಣವಾಗ್ತಿದೆ ಮಕ್ಕಳ ಹೋಮ್ ವರ್ಕ್ ಮಾಡೋ ಕೆಲಸ!

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೂಡ ಮೋದಿ ಗೆಲುವಿಗಾಗಿ ಪ್ರಾರ್ಥಿಸಿ ಅರುಣ್ ವರ್ಣೇಕ‌ರ್ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತದಲ್ಲಿ ತಿಲಕವಿಟ್ಟಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕತ್ತಿಯಿಂದ ಬೆರಳು ಕತ್ತರಿಸಿಕೊಂಡ ಬಳಿಕ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. ಜತೆಗೆ ಸಾಯಿ ಬಾಬಾ, ಪ್ರಧಾನಿ ಮೋದಿಯ ಫೋಟೊಗೂ ರಕ್ತದ ತಿಲಕವಿಟ್ಟಿದ್ದರು.ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಆಸೆಯನ್ನು ತಿಳಿಸಿದ್ದರು. ಅಂಕೋಲಾಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲು ಪ್ರಯತ್ನಿಸುವುದಾಗಿ ಹೇಳಿದ್ದರು. ಆದರೆ, ಅವರ ಬಯಕೆ ಫಲಪ್ರದವಾಗಿರಲಿಲ್ಲ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ