ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿ ಕೂಡ ದಕ್ಷಿಣ ಕನ್ನಡ ಫಸ್ಟ್, ಉಡುಪಿ ಸೆಕೆಂಡ್
ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿ ಕೂಡ ದಕ್ಷಿಣ ಕನ್ನಡ ಫಸ್ಟ್, ಉಡುಪಿ ಸೆಕೆಂಡ್
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ಈ ಬಾರಿ ದ್ವಿತೀಯ ಪಿಯುಸಿ 81.15% ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ.
ಕಳೆದ ಬಾರಿಯಂತೆ ಈ ಬಾರಿ ಕೂಡ ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ. ಗದಗ (72.86%) ಕೊನೆಯ ಸ್ಥಾನ ಪಡೆದಿದೆ.
GOLD FACTORY NEWS
Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.