• 27 ಜುಲೈ 2024

ದಕ್ಷಿಣ ಕನ್ನಡ ಪ್ರಥಮ ಸ್ಥಾನ!;ವಿದ್ಯಾರ್ಥಿಗಳ ಗೆಲುವಿಗೆ ಅರುಣ್ ಪುತ್ತಿಲ ಹಾರೈಕೆ.

 ದಕ್ಷಿಣ ಕನ್ನಡ ಪ್ರಥಮ ಸ್ಥಾನ!;ವಿದ್ಯಾರ್ಥಿಗಳ ಗೆಲುವಿಗೆ ಅರುಣ್ ಪುತ್ತಿಲ ಹಾರೈಕೆ.
Digiqole Ad

ದಕ್ಷಿಣ ಕನ್ನಡ ಪ್ರಥಮ ಸ್ಥಾನ!;ವಿದ್ಯಾರ್ಥಿಗಳ ಗೆಲುವಿಗೆ ಅರುಣ್ ಪುತ್ತಿಲ ಹಾರೈಕೆ.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಏಪ್ರಿಲ್‌ 10) ಬುಧವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಾಗಲೇ ಫಲಿತಾಂಶ ಬಿಡುಗಡೆ ಮಾಡಿದ್ದು, ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ https://karresults.nic.in/ ವೆಬ್ ಸೈಟ್‌ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.

ನಿಮ್ಮ ಫಲಿತಾಂಶ ಇಲ್ಲಿ ಕ್ಲಿಕ್ ಮಾಡಿ ಚೆಕ್ ಮಾಡಿ😍🤗

https://karresults.nic.in/

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಬುಧವಾರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 5,52,690 ಮಂದಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.

ವಿದ್ಯಾರ್ಥಿಗಳ ಗೆಲುವಿಗೆ ಅರುಣ್ ಪುತ್ತಿಲ ಹಾರೈಕೆ.

ದ್ವಿತೀಯ ಪಿ. ಯು. ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಮತ್ತೆ ರಾಜ್ಯದ ಗಮನ ಸೆಳೆದಿದೆ.ಉತ್ತಮ ಫಲಿತಾಂಶ ಪಡೆದ ನನ್ನೆಲ್ಲಾ ವಿದ್ಯಾರ್ಥಿ ಮಿತ್ರರಿಗೆ ಅಭಿನಂದನೆ ಎಂದು ಶುಭ ಹಾರೈಸಿದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ