• 22 ನವೆಂಬರ್ 2024

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ,ನಗರ ಭಜನೆಗೆ ಚಾಲನೆ

 ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ,ನಗರ ಭಜನೆಗೆ ಚಾಲನೆ
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ,ನಗರ ಭಜನೆಗೆ ಚಾಲನೆ

ಹಿರಿಯರ ಪರಿಶ್ರಮ ಮತ್ತು ಎಲ್ಲರ ಸಹಕಾರದಿಂದ ಭಜನಾ ಮಂಡಳಿಯು ಯಶಸ್ವಿಯಾಗಿ ಮುನ್ನಡೆದು ಇದೀಗ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವುದು ಇಡೀ ಊರಿಗೆ ಹೆಮ್ಮೆಯ ವಿಚಾರ. ಸುಂದರ ಸಭಾಂಗಣದ ವ್ಯವಸ್ಥೆಯನ್ನು ಒಳಗೊಂಡಿರುವ ಭಜನಾ ಮಂದಿರ ಇಡೀ ಊರಿಗೆ ಎಲ್ಲಾ ವಿಚಾರಗಳಲ್ಲಿ ಕೇಂದ್ರ ಸ್ಥಾನವಾಗಿದೆ ಎಂದು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ರಾಮಣ್ಣ ಗೌಡ ಮುಗರಂಜ ಹೇಳಿದರು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮದ ಪ್ರಯುಕ್ತ ನಡೆದ ನಗರ ಭಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ, ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ, ಕಾರ್ಯದರ್ಶಿ ಜಯಂತ ಅಬೀರ ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಂದಿಸಿದರು. ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ. ಮನೆ ಮನೆಗೆ ತೆರಳಿ ಭಜನೆ ಪ್ರಾರಂಭಿಸಲಾಯಿತು.

ಈ ಸುದ್ದಿ ಓದಿದ್ದೀರಾ?:ಕರ್ನಾಟಕದಿಂದ ಮನೆಯಿಂದಲೇ ಮತದಾನ ಮಾಡಲು 12 ಲಕ್ಷ ಮತದಾರರಿಗೆ ಅವಕಾಶ

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ