• 27 ಮೇ 2024

ಐಸ್‌ ಕ್ರೀಂ ಸೇವಿಸಿ ಅವಳಿ ಮಕ್ಕಳ ಅನುಮಾನಾಸ್ಪದ ಸಾವು!

 ಐಸ್‌ ಕ್ರೀಂ ಸೇವಿಸಿ ಅವಳಿ ಮಕ್ಕಳ ಅನುಮಾನಾಸ್ಪದ ಸಾವು!
Digiqole Ad

ಐಸ್‌ ಕ್ರೀಂ ಸೇವಿಸಿ ಅವಳಿ ಮಕ್ಕಳ ಅನುಮಾನಾಸ್ಪದ ಸಾವು!

ಶ್ರೀರಂಗಪಟ್ಟಣ ಏ.18: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಳ್ಳುವ ಗಾಡಿಯಾತನಿಂದ ಐಸ್ ಕ್ರೀಂ ಖರೀದಿಸಿ ತಿನ್ನಿಸಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ವಿದೇಶಗಳಿಂದ 4009ಮಕ್ಕಳ ದತ್ತು ಸ್ವೀಕಾರ

ಐಸ್ ಕ್ರೀಂ ತಿಂದ ಕೆಲವೇ ಸಮಯದಲ್ಲಿ ಮಕ್ಕಳು ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾಗಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ತಾಯಿ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಗ್ರಾಮದ ಬೇರೆ ಮಕ್ಕಳು ಕೂಡ ಆತನಿಂದಲೇ ಐಸ್‌ಕ್ರೀಂ ಖರೀದಿಸಿ ತಿಂದಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ನಮ್ಮ ಸಮಸ್ಯೆ ಕೇಳುವವರಾರು: ಊರು ದೂರು

ಬೇರೆ ಯಾರಿಗೂ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದ್ದು ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!