ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಛಾಟನೆ
ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಛಾಟನೆ
ತಮ್ಮ ಪುತ್ರನಿಗೆ ಟಿಕೆಟ್ ನೀಡದ ಹಿನ್ನಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ DCM ಹಾಗೂ ಹಿರಿಯ ನಾಯಕ KS ಈಶ್ವರಪ್ಪನವರನ್ನು BJPಯಿಂದ ಮುಂದಿನ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಆ ಮೂಲಕ, BJPಗೆ ಸೆಡ್ಡು ಹೊಡೆದು ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿಯ ಅತ್ಯಂತ ಹಿರಿಯ ನಾಯಕರಾದ ಈಶ್ವರಪ್ಪನವರ ವಿರುದ್ಧ ಪಕ್ಷವು ಕಠಿಣ ಕ್ರಮವನ್ನು ಜರುಗಿಸಿದೆ. ಪಕ್ಷದ ಸೂಚನೆ ಕಡೆಗಣಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪಕ್ಷಕ್ಕೆ ಮುಜುಗರವುಂಟು ಮಾಡಿರುವುದಾಗಿ ಉಚ್ಛಾಟನಾ ಆದೇಶದಲ್ಲಿ ತಿಳಿಸಲಾಗಿದೆ.