• 27 ಜುಲೈ 2024

ವಿದ್ಯಾರ್ಥಿನಿಯಿಂದ ಸಿಎಂ ಸಿದ್ದರಾಮಯ್ಯ ಕೊರಳಿಗೆ ‘ಉಚಿತ ಬಸ್‌ ಟಿಕೆಟ್’ಗಳ ಮಾಲೆ.

 ವಿದ್ಯಾರ್ಥಿನಿಯಿಂದ ಸಿಎಂ ಸಿದ್ದರಾಮಯ್ಯ ಕೊರಳಿಗೆ ‘ಉಚಿತ ಬಸ್‌ ಟಿಕೆಟ್’ಗಳ ಮಾಲೆ.
Digiqole Ad

ವಿದ್ಯಾರ್ಥಿನಿಯಿಂದ ಸಿಎಂ ಸಿದ್ದರಾಮಯ್ಯ ಕೊರಳಿಗೆ ‘ಉಚಿತ ಬಸ್‌ ಟಿಕೆಟ್’ಗಳ ಮಾಲೆ.

ಅರಸೀಕೆರೆ ಏ.23: ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ವಿದ್ಯಾರ್ಥಿನಿಯೊಬ್ಬರು ಉಚಿತ ಬಸ್ ಟಿಕೆಟ್ ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿರುವ ಘಟನೆ ವರದಿಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು,
ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

ಈ ಸುದ್ದಿಯನ್ನು ಓದಿದ್ದೀರಾ.?ಸಾನಿಧ್ಯ ಅಭಿವೃದ್ಧಿಗಾಗಿ ದೇವಿ ಮೂಲಕ ಇರುವಿಕೆ ತೋರಿಸಿದ್ದ ದೈವ ..!

ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್‌ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದ್ದಾಳೆ.
‘ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ” ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು ಎಂದು ಹೇಳಿದರು.

ಈ ಸುದ್ದಿಯನ್ನು ಓದಿದ್ದೀರಾ.?ಎಲೆಕ್ಟ್ರಿಕ್ ಸವಾರರಿಗೆ ಬಿಗ್ ಶಾಕ್ ; ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ರದ್ದು

‘ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲೆಯಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ, ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು’ ಎಂದು ಹಾರೈಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ