• 8 ಸೆಪ್ಟೆಂಬರ್ 2024

ಮೂಕ ಮಗುವನ್ನೇ ಕಾಲುವೆಗೆ ಎಸೆದ ಮಹಾತಾಯಿ; ಮೊಸಳೆಯ ಬಾಯಲ್ಲಿ ಸಿಕ್ಕಿತ್ತು ಮಗುವಿನ ಮೃತದೇಹ.!

 ಮೂಕ ಮಗುವನ್ನೇ ಕಾಲುವೆಗೆ ಎಸೆದ ಮಹಾತಾಯಿ; ಮೊಸಳೆಯ ಬಾಯಲ್ಲಿ ಸಿಕ್ಕಿತ್ತು ಮಗುವಿನ ಮೃತದೇಹ.!
Digiqole Ad

ಮೂಕ ಮಗುವನ್ನೇ ಕಾಲುವೆಗೆ ಎಸೆದ ಮಹಾತಾಯಿ; ಮೊಸಳೆಯ ಬಾಯಲ್ಲಿ ಸಿಕ್ಕಿತ್ತು ಮಗುವಿನ ಮೃತದೇಹ.!

ಕಾರವಾರ ಮೇ.05: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಈ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಬಿಸಾಕಿದ್ದಾಳೆ. ವಿನೋದ್ (6) ಮೃತ ದುರ್ದೈವಿ. ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ರವಿಕುಮಾ‌ರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದು, ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ ಎನ್ನಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಬಾಲಕರ ಕತ್ತು ಸೀಳಿ ರಕ್ತ ಕುಡಿದ ಕಟುಕರು; ಉತ್ತರಪ್ರದೇಶದಲ್ಲಿ ನಡೆಯಿತು ಈ ಅಮಾನುಷ ಘಟನೆ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾ‌ರ್ ಜತೆಗೆ ಜಗಳವಾಗಿದ್ದು, ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ. ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್‌ ಠಾಣೆಗೆ ಮಾಹಿತಿ ತಿಳಿಸಿದ್ದು. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿತ್ತು. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದುಕೊಂಡು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ನಡೆದಿತ್ತು.

ಈ ಸುದ್ದಿಯನ್ನು ಓದಿದ್ದೀರಾ.?ಈ ಜಿಲ್ಲೆಯಲ್ಲಿ 108 ಜನ ಮಹಿಳೆಯರು ನಾಪತ್ತೆ ಎಲ್ಲಿಗೆ ಹೋಗಿರಬಹುದು ಇವರೆಲ್ಲಾ….??

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಆಗಾಗ ಮೊಸಳೆಯು ಕಾಣಿಸಿಕೊಂಡಿದೆ. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಹೊರ ಬಂದಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಕೊಡಗು ಜಿಲ್ಲೆಯ ಪೊನ್ನoಪೇಟೆ ಯಲ್ಲಿ ಪಟ್ಟಣ ಸವಾರಿಗೆ ಆಗಮಿಸಿದ ಗಜರಾಜ

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮುಗ್ಧ ಮಗು ಅಸುನೀಗಿದೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ