• 27 ಜುಲೈ 2024

‘ತ್ರಿನಯನಿ’ ಖ್ಯಾತಿಯ ಕಿರುತೆರೆ ನಟಿ ಪವಿತ್ರ ಜಯರಾಮ್ ರಸ್ತೆ ಅಪಘಾತದಲ್ಲಿ ವಿಧಿವಶ.

 ‘ತ್ರಿನಯನಿ’ ಖ್ಯಾತಿಯ ಕಿರುತೆರೆ ನಟಿ ಪವಿತ್ರ ಜಯರಾಮ್ ರಸ್ತೆ ಅಪಘಾತದಲ್ಲಿ ವಿಧಿವಶ.
Digiqole Ad

‘ತ್ರಿನಯನಿ’ ಖ್ಯಾತಿಯ ಕಿರುತೆರೆ ನಟಿ ಪವಿತ್ರ ಜಯರಾಮ್ ರಸ್ತೆ ಅಪಘಾತದಲ್ಲಿ ವಿಧಿವಶ.

ಮೇ.12: ಕನ್ನಡ, ತೆಲುಗು ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕದ ಮಂಡ್ಯ ಮೂಲದ ನಟಿ ಪವಿತ್ರ ಜಯರಾಮ್ (35) ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲಿನ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ 

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಅದರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದ್ದರು. ಇವರ ಬಗ್ಗೆ ಹೆಚ್ಚಿನ ಪರಿಚಯ ಜನರಿಗೆ ಅಗತ್ಯವಿಲ್ಲ ಎನ್ನುವಷ್ಟು ಜನಪ್ರಿಯತೆ ಗಳಿಸಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದ ಪವಿತ್ರ ಜಯರಾಮ್ ಬಳಿಕ ಹಲವು ಧಾರಾವಾಹಿಗಳಲ್ಲಿ ಅಭಿನಯ ಮಾಡಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಮಹಿಳಾ ಜಿಲ್ಲಾಧ್ಯಕ್ಷರಾಗಿ ಶೋಭಾ ಪಾಂಗಳಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ ಆಯ್ಕೆ

ನಂತರ ತೆಲುಗು ಕಿರುತೆರೆಯನ್ನು ಪ್ರವೇಶಿಸಿದ ಅವರು ‘ತ್ರಿನಯನಿ’ ಧಾರಾವಾಹಿ ಮೂಲಕ ಅಲ್ಲಿನ ಪ್ರೇಕ್ಷಕರಿಗೆ ಪ್ರಿಯರಾಗಿದ್ದರು. ಇಂದು ಬೆಳಗ್ಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ಬರುವ ವೇಳೆ ಕರ್ನೂಲ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಪವಿತ್ರ ಜಯರಾಮ್ ಅವರ ನಿಧನಕ್ಕೆ ಕಿರುತೆರೆಯ ಹಲವಾರು ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ