• 26 ಜುಲೈ 2024

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನಾ ಸಭೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ. 

 ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನಾ ಸಭೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ. 
Digiqole Ad

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನಾ ಸಭೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ. 

ಕಾಣಿಯೂರು: ಕಡಬ ತಾಲೂಕು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನೆ ಸಭೆ ಮತ್ತು ಸುವರ್ಣ ಮಹೋತ್ಸವದ ಪ್ರಯುಕ್ತ ಮೇ 21, 22ರಂದು ನಡೆಯಲಿರುವ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಮೇ 13ರಂದು ಅನಾವರಣಗೊಳಿಸಲಾಯಿತು.

ಈ ಸುದ್ದಿಯನ್ನು ಓದಿದ್ದೀರಾ.?ಹಾಡು ಹಗಲೇ ತಿರುಗಾಟ ನಡೆಸುತ್ತಿರುವ ಕಾಡನೆ ಅಪಾಯದಿಂದ ಪಾರಾದ ಬೈಕ್ ಸವಾರ

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ರಾಗಿರುವ ಪದ್ಮಯ್ಯ ಗೌಡ ಅನಿಲರವರು ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು. ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಅಧ್ಯಕ್ಷತೆ ವಹಿಸಿದ್ದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಭಜಾನ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ ಸ್ವಾಗತಿಸಿ, ವಂದಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಅಪ್ರಾಪ್ತ ಮಗನ ತಪ್ಪಿಗೆ ಪೋಷಕರ ಮೇಲೆ ಬಿತ್ತು ಕೇಸ್!!

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಪ್ರಯುಕ್ತ ಮೇ 21,22ರಂದು ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮ, ಮಹಾಗಣಪತಿ ಹೋಮ, ನರಸಿಂಹ ಹೋಮ, ಏಕಾಹ ಭಜನೆ, ಸತ್ಯನಾರಾಯಣ ಪೂಜೆ ಉದ್ಯಾಪನೆ ಕಾರ್ಯಕ್ರಮ ಹಾಗೂ ಭಜನಾ ಮಂಗಲೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ  ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ನೇತೃತ್ವದ ತಂಡದಿಂದ ಭಕ್ತಿ ಗಾಯನ ಮತ್ತು ಭಜನಾ ಮಂಗಳೋತ್ಸವದಲ್ಲಿ ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ