• 27 ಜುಲೈ 2024

CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಕೇರಳದ ಇಬ್ಬರ ಸೆರೆ

 CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಕೇರಳದ ಇಬ್ಬರ ಸೆರೆ
Digiqole Ad

CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಕೇರಳದ ಇಬ್ಬರ ಸೆರೆ

ಉಳ್ಳಾಲ: ಅಕ್ರಮ ಪಿಸ್ತೂಲು ಹೊಂದಿದ್ದ ಕೇರಳ ಮೂಲದ ಇಬ್ಬರನ್ನು ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಬಳಿಯಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕಾಸರಗೋಡಿನ ಬಶೀರ್ ಮತ್ತು ನಾಸೀರ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 1-ಪಿಸ್ತೂಲ್,2- ಸಜೀವ ಮದ್ದುಗುಂಡುಗಳು, 2-ಮೊಬೈಲ್ ಫೋನುಗಳು, ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಅಂದಾಜು ರೂ. 7,15,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು.

ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ಧಿ ಓದಿದ್ದೀರಾ: ದೇವರ ಅರ್ಚಕನಿಗೆ ಒಲಿಯಿತು 80 ಲಕ್ಷ ಲಾಟರಿ.

GOLDFACTORYNEWS.COM
the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.
Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ