ಯಡಿಯೂರಪ್ಪ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆ ಮೃತ್ಯು!
ಯಡಿಯೂರಪ್ಪ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆ ಮೃತ್ಯು!
ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಹಾಯ ಮಾಡುವ ಬದಲು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
ದೂರುದಾರೆ ಮಹಿಳೆ ಕಳೆದ ಕೆಲವು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಕಾಣುತ್ತಿದ್ದಂತೆ ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಸುದ್ಧಿ ಓದಿದ್ದೀರಾ: ಉಪಕಾರ ಮಾಡಿದ್ರೆ ಈಗ ನನ್ನ ಮೇಲೆ ಹೀಗೆ ಮಾಡಿದ್ದಾರೆ: ಯಡಿಯೂರಪ್ಪ