ಶ್ರದ್ಧಾ ಭಕ್ತಿಯಿಂದ ವಿಜೃಂಭಿಸಿದ ಕರ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ
ಶ್ರದ್ಧಾ ಭಕ್ತಿಯಿಂದ ವಿಜೃಂಭಿಸಿದ ಕರ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ
ಈಶ್ವರಮಂಗಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಶಾಲಾ ವಿದ್ಯಾರ್ಥಿಗಳು ನಾಸಿಕ್ ಬ್ಯಾಂಡ್ ಜೊತೆಗೆ ಶಿಕ್ಷಣದ ಜಾಥದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು .SDMC ಅಧ್ಯಕ್ಷರಾದ ಸೂಫಿ BH ಹಾಗೂ ಉಪಾಧ್ಯಕ್ಷರಾದ ಸಂಗೀತ ರೈ ಹಾಗೂ ಸರ್ವ ಸದಸ್ಯರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು . ಹೊಸದಾಗಿ ಸೇರಿದ ವಿದ್ಯಾರ್ಥಿಗಳನ್ನು ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಮೇಶ್ ಶಿರ್ಲಾಲ್ ಎಲ್ಲರನ್ನೂ ಸ್ವಾಗತಿಸಿದರು .ಶಿಕ್ಷಕಿಯರಾದ ಕುಮಾರಿ ವಿಜೇತ ,ಶ್ರೀಮತಿ ಆಶಾಲತಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ಹಲೀಮ ನಜುಮುನ್ನಿಸ ಇವರು ಸಹಕರಿಸಿದರು.
GFN REPORTER: RAMESH SHIRLAL