• 8 ನವೆಂಬರ್ 2024

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ 

 ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ 
Digiqole Ad

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ 

ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು.

ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ ಕಾಲೇಜು ಸಂಪ್ಯ ಇಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರರ ಮತಯಾಚಿಸುವ ಮೂಲಕ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡರ ಜೊತೆ ತೆರಳಿ ಬಿರುಸಿನ ಪ್ರಚಾರ ನಡೆಸಲಾಯಿತು. 

ಬಿಜೆಪಿ ಮುಖಂಡ ಅರುಣ್ ಪುತ್ತಿಲ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಅಧ್ಯಕ್ಷ ಜೀವಂದರ್ ಜೈನ್,ಪ್ರಸನ್ನ ಮಾರ್ತ , ನಿತೀಶ್ ಶಾಂತಿವನ, ಯುವರಾಜ್ ಪೆರಿಯೋತ್ತಡಿ, ಅಜಿತ್ ಬಲ್ನಾಡು ಸಹಿತ ಹಲವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ