• 27 ಜುಲೈ 2024

ಸಂಭ್ರಮ ಸಡಗರದಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಆರಂಭ ದಿನಾಚರಣೆ.

 ಸಂಭ್ರಮ ಸಡಗರದಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಆರಂಭ ದಿನಾಚರಣೆ.
Digiqole Ad

ಸಂಭ್ರಮ ಸಡಗರದಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಆರಂಭ ದಿನಾಚರಣೆ.

ಕಡಬ ತಾಲೂಕು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವವನ್ನು ವಾದ್ಯ ಘೋಷಗಳೊಂದಿಗೆ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾರದಾ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳಿಗೆ ಆರತಿಯನ್ನು ಬೆಳಗಿ ತಿಲಕವನ್ನು ಇಟ್ಟು ಶಿಕ್ಷಕ ವೃಂದದವರು ಸ್ವಾಗತಿಸಿ ಮಕ್ಕಳನ್ನು ಸಭಾಂಗಣಕ್ಕೆ ಬರಮಾಡಿಕೊಳ್ಳುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ವಹಿಸಿದ್ದರು. ಇದೇ ವೇಳೆ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ವಿಶೇಷವಾಗಿ ಈ ಸಂದರ್ಭದಲ್ಲಿ ಆರತಿ ಬೆಳಗಿ ತಿಲಕವನ್ನಿಟ್ಟು ಸ್ವಾಗತಿಸಲಾಯಿತು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮದ ಮುಖ್ಯಗುರುಗಳಾದ ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಗುರುಗಳಾದ ವಿನಯ ವಿ ಶೆಟ್ಟಿ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಜಯಶೀಲ ಕೆ ಪ್ರಾರ್ಥಿಸಿದರು. ಶಿಕ್ಷಕಿ ಸೌಮ್ಯ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶರ್ಮಿಳಾ ಕೆ ಎಸ್ ವಂದಿಸಿದರು. ಶಿಕ್ಷಕಿ ವಿಮಲ, ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಕಾರ್ಯಕ್ರಮವನ್ನು ಸಂಘಟಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಸಾಂದೀಪನಿಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ