ದಕ್ಷಿಣ ಕನ್ನಡದಲ್ಲಿ ಚೌಟ; ಉಡುಪಿಯಲ್ಲಿ ಕೋಟ ಗೆಲುವು
ದಕ್ಷಿಣ ಕನ್ನಡದಲ್ಲಿ ಚೌಟ; ಉಡುಪಿಯಲ್ಲಿ ಕೋಟ ಗೆಲುವು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಅವರು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪದ್ಮರಾಜ್ ಅವರ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಅದೇರೀತಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆದ್ದಿದ್ದಾರೆ. ಆ ಮೂಲಕ ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿಯ ಎರಡೂ ಕ್ಷೇತ್ರಗಳನ್ನು ಬಿಜೆಪಿ ಈ ಬಾರಿಯೂ ಉಳಿಸಿಕೊಂಡಿದೆ.