• 18 ಜೂನ್ 2024

ಪ್ರವೀಣ್‌ ನೆಟ್ಟಾರು ಹತ್ಯೆ ಮತ್ತೊಬ್ಬ ಆರೋಪಿ ಬಂಧನ

 ಪ್ರವೀಣ್‌ ನೆಟ್ಟಾರು ಹತ್ಯೆ ಮತ್ತೊಬ್ಬ ಆರೋಪಿ ಬಂಧನ
Digiqole Ad

ಪ್ರವೀಣ್‌ ನೆಟ್ಟಾರು ಹತ್ಯೆ ಮತ್ತೊಬ್ಬ ಆರೋಪಿ ಬಂಧನ

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ BJP ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು NIA ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂದು ಗುರುತಿಸಲಾಗಿದೆ. ಈತ ಮುಂಬೈನಿಂದ ವಿಮಾನ ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ. ರಿಯಾಜ್ ಬಂಧನದೊಂದಿಗೆ ಈ ಪ್ರಕರಣದಲ್ಲಿ ಈವರೆಗೆ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿದೆ. ಕಳೆದ ತಿಂಗಳು ಮುಸ್ತಾಫಾ ಪೈಚರ್‌ನನ್ನು ಬಂಧಿಸಲಾಗಿತ್ತು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!