• 18 ಜೂನ್ 2024

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

 ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ
Digiqole Ad

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನಿ ಮೋದಿಯವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಕೋರಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ಮಿತ್ರ ಪಕ್ಷಗಳ ಜೊತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!