ಮೋದಿಯನ್ನೇ ನಾಯಕರಾಗಿ ಆಯ್ಕೆ ಮಾಡಿದ ಮೈತ್ರಿ ಕೂಟ,ಮೋದಿ 3.0 ಅಲೆ ಪ್ರಾರಂಭ.
ಮೋದಿಯನ್ನೇ ನಾಯಕರಾಗಿ ಆಯ್ಕೆ ಮಾಡಿದ ಮೈತ್ರಿ ಕೂಟ,ಮೋದಿ 3.0 ಅಲೆ ಪ್ರಾರಂಭ.
ನವದೆಹಲಿ: ಎನ್‌ಡಿಎ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಆಯ್ಕೆ ಮಾಡಲಾಗಿದ್ದು, ಜೂನ್ 8 ರಂದು ಮೂರನೇ ಅವಧಿಗೆ( ಮೋದಿ .3.0) ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಸಂಜೆ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಮೈತ್ರಿಕೂಟ ನಾಯಕ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಲಾಯಿತು. ಬಳಿಕ ಶ್ರೀ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಯಿತು. ಇದು ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲು ದಾರಿ ಮಾಡಿಕೊಟ್ಟಿದೆ. ಇದೇ ವೇಳೆ ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದ್ದು.ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ನಾಯಕರು ಉಪಸ್ಥಿತರಿದ್ದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.