• 26 ಜುಲೈ 2024

ಬ್ಯಾಂಕ್‌ ಸಾಲಗಾರರಿಗೆ ಗುಡ್‌ನ್ಯೂಸ್‌ ಕೊಟ್ಟ RBI

 ಬ್ಯಾಂಕ್‌ ಸಾಲಗಾರರಿಗೆ ಗುಡ್‌ನ್ಯೂಸ್‌ ಕೊಟ್ಟ RBI
Digiqole Ad

ಬ್ಯಾಂಕ್‌ ಸಾಲಗಾರರಿಗೆ ಗುಡ್‌ನ್ಯೂಸ್‌ ಕೊಟ್ಟ RBI

ಭಾರತೀಯ ರಿಸರ್ವ್‌ ಬ್ಯಾಂಕ್‌ ದೇಶದಲ್ಲಿ ರೆಪೋ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡದೆ ಹಾಲಿಯಿರುವ 6.5% ದರವನ್ನೇ ಮುಂದುವರಿಸಿದೆ. ಆ ಮೂಲಕ ಬಡ್ಡಿ ದರದ ಏರಿಕೆ ಆತಂಕದಲ್ಲಿದ್ದ ಸಾವಿರಾರು ಬ್ಯಾಂಕ್‌ ಸಾಲಗಾರರಿಗೆ ಗುಡ್‌ನ್ಯೂಸ್‌ ನೀಡಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿರುವ ಗವರ್ನರ್‌ ಶಶಿಕಾಂತ್‌ ದಾಸ್‌ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಕಳೆದ 15-16 ತಿಂಗಳಿಂದ ಆರ್​ಬಿಐ ತನ್ನ ರೆಪೋ ಅಥವಾ ಬಡ್ಡಿದರದಲ್ಲಿ ಬದಲಾವಣೆ ಮಾಡಿಲ್ಲ. 2023ರ ಫೆಬ್ರುವರಿ 8ರಂದು ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅಲ್ಲಿಂದ ಈವರೆಗೂ ರೆಪೋ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಇನ್ನಷ್ಟು ತಿಂಗಳು ಇದೇ ದರ ಮುಂದುವರಿಯುವ ಸಾಧ್ಯತೆ ಇದೆ. ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆಯಾಗುವುದಿಲ್ಲ. ಇತ್ತ 2025ರ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಆರ್‌ಬಿಐ ನೀಡಿದ್ದರಿಂದ ಹೆಚ್ಚಿಸಿದ್ದರಿಂದ ಸೆನ್ಸೆಕ್ಸ್ 600 ಅಂಕ ಜಿಗಿತ ಕಂಡಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ