• 27 ಜುಲೈ 2024

ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ

 ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ
Digiqole Ad

ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ

ಚಂದನ್ ಶೆಟ್ಟಿ  ಮತ್ತು ನಟಿ ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದೀಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ಚಂದನ್ ಶೆಟ್ಟಿ- ನಿವೇದಿತಾ ಗೌಡ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ. ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್​, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತೆ.  ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಅಲ್ಲದೇ ಕೋರ್ಟ್​ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣವಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ