• 11 ಜೂನ್ 2024

3ನೇ ಬಾರಿ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

 3ನೇ ಬಾರಿ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ
Digiqole Ad

3ನೇ ಬಾರಿ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ  

ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಟಿವಿ ಸುದ್ದಿ ವಾಹಿನಿಗಳು ಮತ್ತು X ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ

ಸ್ಪಷ್ಟ ಬಹುಮತದ ಮೂಲಕ NDA ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಇನ್ನು ಈ ಕಾರ್ಯಕ್ರಮದಲ್ಲಿ ದೇಶ-ವಿದೇಶದ ಗಣ್ಯರು ಭಾಗಿಯಾಗಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಾರ್ಕ್ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!