• 26 ಜುಲೈ 2024

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ: ಕಿಸಾನ್‌ ಸಮ್ಮನ್‌ ನಿಧಿ ಕಡತಕ್ಕೆ ಮೋದಿ ಸಹಿ

 ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ: ಕಿಸಾನ್‌ ಸಮ್ಮನ್‌ ನಿಧಿ ಕಡತಕ್ಕೆ ಮೋದಿ ಸಹಿ
Digiqole Ad

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ: ಕಿಸಾನ್‌ ಸಮ್ಮನ್‌ ನಿಧಿ ಕಡತಕ್ಕೆ ಮೋದಿ ಸಹಿ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಮೋದಿ ಅವರು ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್‌ಗೆ ಸಹಿ ಹಾಕಿದರು. ಅಧಿಕಾರಕ್ಕೆ ಮರಳುತ್ತಿದ್ದಂತೆ ಮೋದಿ ಕಿಸಾನ್​ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆ ಮಾಡಿದ್ದಾರೆ. ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಈ ಕಡತಕ್ಕೆ ಸಹಿ ಹಾಕಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ‘ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ತಕ್ಷಣ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದ್ದಾಗಿದೆ ಎಂದರು.ಮುಂದಿನ ದಿನಗಳಲ್ಲಿ ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ನಾವು ಬಯಸುತ್ತೇವೆ ಎಂದು ಹೇಳಿದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ