• 11 ಜೂನ್ 2024

ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚು ಪ್ರತಿಬಂಧಕ ಅಳವಡಿಕೆ: ಗುಂಡೂರಾವ್

 ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚು ಪ್ರತಿಬಂಧಕ ಅಳವಡಿಕೆ: ಗುಂಡೂರಾವ್
Digiqole Ad

ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚು ಪ್ರತಿಬಂಧಕ ಅಳವಡಿಕೆ: ಗುಂಡೂರಾವ್ 

ದ .ಕ. ಜಿಲ್ಲೆಯಲ್ಲಿ ಸಿಡಿಲು-ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಪ್ರಾಯೋಗಿಕವಾಗಿ ಜಿಲ್ಲಾಡಳಿತದ ವತಿಯಿಂದ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಕಳೆದ ಸುಮಾರು 10 ವರ್ಷಗಳಲ್ಲಿ ಈ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿದೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಈ ಭಾಗದಲ್ಲಿ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶಗಳಲ್ಲಿ ಈ ಮಿಂಚು ಪ್ರತಿಬಂಧಕ ಅಳವಡಿಸಲು ಕ್ರಮ ವಹಿಸಿದೆ ಎಂದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!