• 26 ಜುಲೈ 2024

ನಟ ದರ್ಶನ್ ಬಂಧನ!

 ನಟ ದರ್ಶನ್ ಬಂಧನ!
Digiqole Ad

ನಟ ದರ್ಶನ್ ಬಂಧನ!

 

ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದರು. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ದಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ