• 18 ಜೂನ್ 2024

ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

 ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!
Digiqole Ad

ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ನಟ ದರ್ಶನ್‌ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿಯೇ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಏನಿದೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸರು ಪವಿತ್ರಾಗೌಡಳನ್ನು ವಶಪಡಿಸಿಕೊಂಡಿಸಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!