• 11 ಜೂನ್ 2024

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

 ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Digiqole Ad

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬ್ರಿಜೇಶ್ ಚೌಟ ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ದಾರಿ ಯುದ್ಧಕ್ಕೂ ಸ್ಥಳೀಯ ಕಾರ್ಯಕರ್ತರು ಕ್ಯಾಪ್ಟನ್‌ ಬ್ರಿಜೇಶ್ ಚೌಟರವರಿಗೆ ಜಯಕಾರ ಹಾಕುವ ಮೂಲಕ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!