• 8 ಸೆಪ್ಟೆಂಬರ್ 2024

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಸ್ಕಾರ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ. 

 ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಸ್ಕಾರ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ. 
Digiqole Ad

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಸ್ಕಾರ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ. 

ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ವಿದ್ಯಾರ್ಥಿಗಳಿಗೆ ನಿತ್ಯ ನಾಮಜಪದ ವೈಶಿಷ್ಟ್ಯ, ಸಂಸ್ಕಾರಯುತರಾಗಿ ಬಾಳುವ ಬಗ್ಗೆ ಹಾಗೂ ಅವುಗಳನ್ನು ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿರುವ ಪೌರೋಹಿತ್ಯರಾದ ಶ್ರೀಯುತ ಸತ್ಯನಾರಾಯಣ ಕಾರಂತ್ ರಾಮಕುಂಜ ನೀಡಿದರು.

ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾದೋಡಿ ಯವರು ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ರೈ , ವಿಜ್ಞಾತ್ರಿ ಬಿ ಪ್ರಾರ್ಥಿಸಿದರು. ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಶ್ರೀಮತಿ ವಿನಯ ವಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಂಗ್ಲ ಮಾಧ್ಯಮದ ಮುಖ್ಯ ಗುರು ನಾರಾಯಣ ಭಟ್ ಧನ್ಯವಾದ ಸಮರ್ಪಿಸಿದರು .ಆಂಗ್ಲ ಮಾಧ್ಯಮದ ಸಹಮುಖ್ಯಸ್ಥೆ ಶ್ರೀಮತಿ ಅನಿತಾ ಜೆ ರೈ ಹಾಗೂ ಸಹ ಆಡಳಿತಾಧಿಕಾರಿ ಶ್ರೀಮತಿ ಹೇಮನಾಗೇಶ್ ರೈ, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿಮಲಾ ಸಿ ಎಚ್ ಮತ್ತು ಜಯಶೀಲ ಕೆ ಸಹಕರಿಸಿದರು.

ಈ ಸುದ್ದಿಯನ್ನು ಓದಿದ್ದೀರಾ.?ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ.

Digiqole Ad

ಈ ಸುದ್ದಿಗಳನ್ನೂ ಓದಿ