ದಕ್ಷಿಣ ಕನ್ನಡದಲ್ಲಿ ನಾಳೆಯೂ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ನಾಳೆಯೂ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆಯೂ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಇಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್ ಮುನ್ಸೂಚನೆಯಿದೆ. ಹೀಗಾಗಿ, ಜೂ.28ರಂದು ಕೂಡ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗುವುದು ಎಂದರು.