ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ
ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ
ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬಲ್ಮಠ ರೋಡ್ ಸಮೀಪ ನಡೆದಿದೆ. ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಬಿಹಾರ ಮೂಲದ ಚಂದನ್ ಮತ್ತು ರಾಜಕುಮಾರ್ ಮಣ್ಣಿನಡಿ ಸಿಲುಕಿರುವ ಕಾರ್ಮಿಕರು. ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.