ದ.ಕ.: ಎರಡು ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ
ದ.ಕ.: ಎರಡು ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿರುವ ಕಾರಣ ಇಂದು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಳೆ ಅವಾಂತರ ಜೋರಾಗಿದ್ದು, ಅಲ್ಲಲ್ಲಿ ಭೂಕುಸಿತ ಸೇರಿದಂತೆ ಕೆಲವು ಅನಾಹುತ ಕೂಡ ಸಂಭವಿಸುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಎರಡು ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿ ಅಲ್ಲಿನ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.