ಉಡುಪಿ, ಉತ್ತರ ಕನ್ನಡದಲ್ಲಿ ನಾಳೆಯೂ ಶಾಲಾ- ಕಾಲೇಜುಗಳಿಗೆ ರಜೆ
ಉಡುಪಿ, ಉತ್ತರ ಕನ್ನಡದಲ್ಲಿ ನಾಳೆಯೂ ಶಾಲಾ- ಕಾಲೇಜುಗಳಿಗೆ ರಜೆ
ಮಳೆ ಆರ್ಭಟ ಮುಂದುವರಿದಿರುವ ಕಾರಣ ನಾಳೆ ಉಡುಪಿ ಜಿಲ್ಲೆಯ ಎರಡು & ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಉಡುಪಿಯ ಕುಂದಾಪುರ & ಬ್ರಹ್ಮಾವರ ತಾಲೂಕಿನಾದ್ಯಂತ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಕಾರಣ ಅಂಗನವಾಡಿಯಿಂದ ಪಿಯು ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಅದೇರೀತಿ ಉತ್ತರ ಕನ್ನಡದಲ್ಲಿಯೂ ಮಳೆ ಜೋರಾದ ಕಾರಣ ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
Jul 5, 2024, 8:45 PM | 1 of 120 Stories