• 25 ಜನವರಿ 2025

PHOTO: ಉಡುಪಿ ಜಿಲ್ಲೆಯಲ್ಲಿ ಮಳೆಯ ಅವಾಂತರ

 PHOTO: ಉಡುಪಿ ಜಿಲ್ಲೆಯಲ್ಲಿ ಮಳೆಯ ಅವಾಂತರ
Digiqole Ad

PHOTO: ಉಡುಪಿ ಜಿಲ್ಲೆಯಲ್ಲಿ ಮಳೆಯ ಅವಾಂತರ

ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ಉಡುಪಿ ಜಿಲ್ಲೆಯ ಹಲವು ಪ್ರದೇಶಗಳು ಅಕ್ಷರಶಃ ಜಲ ದಿಗ್ಭಂಧನಕ್ಕೆ ಒಳಗಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ-ಹಾನಿ ಸಂಭವಿಸಿದೆ. ಸುಮಾರು ಮೂರು ಗಂಟೆ ಸುರಿದ ಮಳೆಗೆ ಉಡುಪಿ ನಗರ ತತ್ತರವಾಗಿದೆ.

ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಅಗ್ನಿಶಾಮಕ ದಳದ ಬೋಟ್ ನಲ್ಲಿ ಜನರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರು ಮಕ್ಕಳನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ