• 19 ಜನವರಿ 2025

ಎರಡು ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ

 ಎರಡು ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ
Digiqole Ad

ಎರಡು ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ

ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ. ಎರಡು ತಿಂಗಳ ಹಣ ಒಂದೇ ಕಂತಿನಲ್ಲಿ ಪಾವತಿ ಮಾಡದೇ ಇದ್ದರೂ, ಒಂದು ವಾರದ ಅಂತರದಲ್ಲಿ ಎರಡು ಬಾರಿ ಹಣ ಜಮೆಯಾಗುತ್ತದೆ ಎಂದು ಸಚಿವೆ ಭರವಸೆ ನೀಡಿದ್ದು ಮಹಿಳೆಯರ ಖುಷಿ ಹೆಚ್ಚಿಸಿದೆ. ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದು, ಸರ್ಕಾರ ಇದಕ್ಕೆ ಹಣವನ್ನು ಹೊಂದಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದೆ. ಈಗ ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ