ನಾಳೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ನಾಳೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
holiday Notice 2024-4_240715_192244
ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಾಳೆಯೂ(ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆಯನ್ನು ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಮಂಗಳವಾರವೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಎರಡೂ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಹಿಡಿದು ಪಿಯು ಕಾಲೇಜುವರೆಗೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆಯಾ ಡಿಸಿಗಳು ಆದೇಶ ನೀಡಿದ್ದಾರೆ.