ಉಡುಪಿ, ಕೊಡಗಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ, ಕೊಡಗಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆಯ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕೊಡುಗು ಜಿಲ್ಲೆಯಲ್ಲಿಯೂ ನಾಳೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿಯೂ ನಾಳೆ ಶಾಲೆ, ಮದ್ರಸಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಇಂಪಾ ಶೇಖರ್ ಆದೇಶಿಸಿದ್ದಾರೆ.