ಉದ್ಯೋಗ, ಹಕ್ಕುಪತ್ರಕ್ಕಾಗಿ ರಾತ್ರೋ ರಾತ್ರಿ ಧರಣಿ ಕೂತ ಕೊರಗ ಸಮುದಾಯ.
ಉದ್ಯೋಗ, ಹಕ್ಕು ಪಾತ್ರಕ್ಕಾಗಿ ರಾತ್ರೋ ರಾತ್ರಿ ಧರಣಿ ಕೂತ ಕೊರಗ ಸಮುದಾಯ.
ಮಣಿಪಾಲ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ .ನಿರಂತರ ಮಳೆಯ ಮಧ್ಯೆಯೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊರಗ ಸಮುದಾಯದ ಮಕ್ಕಳು, ಮಹಿಳೆಯರು, ವೃದ್ಧರು ಧರಣಿ ನಡೆಸಿದ್ದಾರೆ. ಅಲ್ಲೇ ಅಡುಗೆಯನ್ನು ತಯಾರಿಸಿ, ಊಟ ಮಾಡಿ ರಾತ್ರಿ ಯು ಕೂಡ ಧರಣಿ ಮುಂದುವರೆಸಿದ್ದಾರೆ. ಸುಮಾರು 25 ಮಂದಿ ರಾತ್ರಿ ವೇಳೆ ಧರಣಿ ಸ್ಥಳದಲ್ಲಿ ಉಳಿದುಕೊಂಡು ತಮ್ಮ ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಖ್ಯಮಂತ್ರಿ ಭೇಟಿಗೆ ಅವಕಾಶ ಕಲ್ಪಿಸುವವರೆಗೆ ಹೋರಾಟ ಮುಂದುವರೆಸಲಾಗುವುದು. ನಮ್ಮ ಬೇಡಿಕೆ ಹಾಗೂ ಸಮಸ್ಯೆಗಳನ್ನು ಮುಖ್ಯಮಂತ್ರಿ ಜೊತೆ ಹೇಳಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳ ಅಧ್ಯಕ್ಷೆ ಸುಶೀಲಾ ನಾಡ ತಿಳಿಸಿದ್ದಾರೆ ಎನ್ನಲಾಗಿದೆ.