• 25 ಜನವರಿ 2025

ವಯನಾಡಿನಲ್ಲಿ ಸತ್ತವರ ಸಂಖ್ಯೆ 41ಕ್ಕೆ ಏರಿಕೆ

 ವಯನಾಡಿನಲ್ಲಿ ಸತ್ತವರ ಸಂಖ್ಯೆ 41ಕ್ಕೆ ಏರಿಕೆ
Digiqole Ad

ವಯನಾಡಿನಲ್ಲಿ ಸತ್ತವರ ಸಂಖ್ಯೆ 41ಕ್ಕೆ ಏರಿಕೆ

ವಯನಾಡಿನ ಚೂರಲ್‌ಮಲೆ, ಮುಂಡಕೈ ಭೂಕುಸಿತ ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಇದೀಗ ಸೇನೆ ದೌಡಾಯಿಸುತ್ತಿದೆ. ಕೇರಳದ ಚರಿತ್ರೆಯಲ್ಲಿಯೇ ಅತ್ಯಂತ ದೊಡ್ಡ ದುರಂತವಾಗಿರುವ ಕಾರಣ ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೆ ಮಾತ್ರ ಈ ಎರಡೂ ಪ್ರದೇಶದಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಸದ್ಯ ಹೆಲಿಕಾಪ್ಟರ್‌ ಮೂಲಕ ರಕ್ಷಣಾ ಕಾರ್ಯಾಚರಣೆ ಸಾಧುವಲ್ಲ ಎನ್ನಲಾಗುತ್ತದೆ. 100ಕ್ಕೂ ಹೆಚ್ಚು ಮಂದಿ ಮಣ್ಣಿನಡಿಯಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4.10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ