• 7 ಡಿಸೆಂಬರ್ 2024

ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ

 ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ
Digiqole Ad

ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ

ಪ್ಯಾರಿಸ್ ಒಲಿಂಪಿಕ್ಸ್​ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಅವರನ್ನು ಸೋಲಿಸಿ ಮನುಭಾಕರ್ – ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ. ಸರಬ್ಜೋತ್ ಸಿಂಗ್ ಜೊತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಮನು ಭಾಕರ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತಕ್ಕೆ 2ನೇ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಸದ್ಯ ಭಾರತ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ 2 ಪದಕ ತನ್ನದಾಗಿಸಿಕೊಂಡಿದೆ. 2 ಪದಕ ಕೂಡ ಶೂಟಿಂಗ್​ ವಿಭಾಗದಲ್ಲಿ ಬಂದಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ