ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕಾಸರಗೋಡು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದಾರೆ. ಕೇರಳದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ರಾಜ್ಯ, CBSE, ICSC, ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದರಸ & ವೃತ್ತಿಪರ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ಆದರೆ, ಈಗಾಗಲೇ ಘೋಷಣೆ ಮಾಡಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.