ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದರಂತೆ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.