• 7 ಡಿಸೆಂಬರ್ 2024

ಕಡಬ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ.

 ಕಡಬ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ.
Digiqole Ad

ಕಡಬ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದ ಒಕ್ಕೂಟಗಳ ಪದಾಧಿಕಾರಿಗಳಿಗೆ 2024-25ನೇ ಸಾಲಿನ ತರಬೇತಿಯು ಕಡಬ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.
ತರಬೇತಿ ಕಾರ್ಯಗಾರವನ್ನು ಉಧ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲೆ 02 ಪುತ್ತೂರು ವಿಭಾಗದ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಮಾತನಾಡಿ. ಒಕ್ಕೂಟದ ಪಧಾದಿಕಾರಿಗಳು ಒಂದೇ ಕುಟುಂಬದವರಂತೆ ವರ್ಷಕೊಂದು ಬಾರಿ ಒಟ್ಟು ಸೇರಿ ತಮ್ಮ ಪರಿಚಯಗಳನ್ನು ಮಾಡಿಕೊಳ್ಳುವುದರ ಜೊತೆಗೆ ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಪಕ ನಿರ್ವಹಣೆಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ಪಡೆದುಕೊಂಡರೆ ಒಕ್ಕೂಟದ ನಿರ್ವಹಣಾ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ ಎನ್ನುವುದು ಪೂಜ್ಯರ ದೂರದೃಷ್ಟಿತ್ವವಾಗಿರುತ್ತದೆ.
ಕಡಬ ವಲಯದ ಒಕ್ಕೂಟದ ಪದಾಧಿಕಾರಿಗಳು ತರಬೇತಿ ನಂತರ ಸಹಕಾರ ಮನೋಭಾವನೆಯನ್ನು ಹೊಂದಿರುವ ಗಣಗಳಂತೆ ಕೆಲಸ ನಿರ್ವಹಿಸಬೇಕು.ಧರ್ಮಸ್ಥಳ ಯೋಜನೆ ಪದಾಧಿಕಾರಿಗಳಿಗೆ ಸ್ಥಾನಮಾನಗಳ ಜೊತೆಗೆ ದುರ್ಬಲರನ್ನು ಗುರುತಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಸಂಪೂರ್ಣ ಬೆಂಬಲ ನೀಡುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಗುಣ ಪ್ರತಿಯೊಬ್ಬರಲ್ಲಿ ಇರಬೇಕು ಎಂದರು.
ತಾಲೂಕು ಯೋಜನಾಧಿಕಾರಿ ಮೇದಪ್ಪಗೌಡ ಎನ್ ಪ್ರಗತಿಬಂದು ಸ್ವಸಹಾಯ ಸಂಘಗಳ ಗುಣಮಟ್ಟ ಹೆಚ್ಚಿಸುವಲ್ಲಿ ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಸಮರ್ಪಕ ಬಳಕೆಯಲ್ಲಿ ಒಕ್ಕೂಟದ ಪದಾಧಿಕಾರಿಗಳ ಪಾಲ್ಗೊಳ್ಳುವಿಕೆ ಬಗ್ಗೆ ತರಬೇತಿ ನೀಡಿದರು.
ಜಿಲ್ಲಾ ಪ್ರಬಂಧಕ ರಾದ ವಿಶ್ವನಾಥ ˌಹಾಗೂ ಜಿಲ್ಲಾ ವಿಮಾ ಸಮನ್ವಯಾಧಿಕಾರಿ ಜನಾರ್ಧನ ಗೌಡ ರವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ತರಬೇತಿ ನೀಡಿದರು.
ಪ್ರಗತಿಬಂಧು ಸ್ವಸಹಾಯ ಸಂಘಗಳ ವಲಯಾಧ್ಯಕ್ಷ ರಾದ ರಮೇಶ್ ರೈ ಆರ್ಪಾಜೆ ಯವರು ಅಧ್ಯಕ್ಷತೆ ವಹಿಸಿದ್ದರು.
ತರಬೇತಿಯನ್ನು ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಸಂಘಟಿಸಿದರು.
ತಾಲೂಕು ಕೃಷಿ ಮೇಲ್ವೀಚಾರಕ ಸೋಮೇಶ್ ಹಾಗೂ ತಾಲೂಕು ವಿಚಕ್ಷಣಾಧಿಕಾರಿ ಶೀಲಾ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ನಳಿನಿ ಸ್ವಾಗತಿಸಿ ಸುಗುಣ ಧನ್ಯವಾದ ನೀಡಿದರು.
ಜಯಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು. ವಲಯದ ಹನ್ನೆರಡು ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಉಪಸ್ಥಿತರಿದ್ದು ಪ್ರಯೋಜನ ಪಡೆದುಕೊಂಡರು.

Digiqole Ad

ಈ ಸುದ್ದಿಗಳನ್ನೂ ಓದಿ