ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದ.ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿನಾಳೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.