ಜಿಲ್ಲೆಯಲ್ಲಿ ಮುಂದುವರಿದ ಮಳೆ. ಶಾಲಾ ಕಾಲೇಜುಗಳಿಗೆ ನಾಳೆ ರಜೆ.
ಜಿಲ್ಲೆಯಲ್ಲಿ ಮುಂದುವರಿದ ಮಳೆ. ಶಾಲಾ ಕಾಲೇಜುಗಳಿಗೆ ಆಗಸ್ಟ್ 2ರಂದು ರಜೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಆಗಸ್ಟ್.2ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ಎಲ್ಲಾ ಕಡೆ ಹಳ್ಳ ಕೊಳ್ಳಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 2ರಂದು ಜಿಲ್ಲಾಧಿಕಾರಿ ಮುನ್ನೈ ಮುಹಿಲನ್ ರಜೆ ಘೋಷಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.